Pages

ದೀಪವು ನಿನ್ನದೆ ಗಾಳಿಯು ನಿನ್ನದೆ

Wednesday, 2 January 2013

ಸಾಹಿತ್ಯ - ಕೆ.ಎಸ್.ನರಸಿಂಹಸ್ವಾಮಿ
ಸಂಕಲನ - ಮೈಸೂರು ಮಲ್ಲಿಗೆ
ಸಂಗೀತ - ಸಿ.ಅಶ್ವಥ್
ಆಧಾರಿತ ರಾಗ - ದಿನ್-ಕಿ-ಪೂರಿಯಾ


ದೀಪವೂ ನಿನ್ನದೆ ಗಾಳಿಯೂ ನಿನ್ನದೆ, ಆರದಿರಲಿ ಬೆಳಕು।
ಕಡಲೂ ನಿನ್ನದೆ ಹಡಗೂ ನಿನ್ನದೆ, ಮುಳುಗದಿರಲಿ ಬದುಕು ॥

ಬೆಟ್ಟವೂ ನಿನ್ನದೆ ಬಯಲೂ ನಿನ್ನದೆ, ಹಬ್ಬಿ ನಗಲಿ ಪ್ರೀತಿ ।
ನೆಳಲೋ ಬಿಸಿಲೋ, ಎಲ್ಲವೂ ನಿನ್ನದೆ, ಇರಲಿ ಏಕರೀತಿ ॥೧॥

ಆಗೊಂದು ಸಿಡಿಲು ಈಗೊಂದು ಮುಗಿಲು, ನಿನಗೆ ಅಲಂಕಾರ ।
ಅಲ್ಲೊಂದು ಹಕ್ಕಿ ಇಲ್ಲೊಂದು ಮುಗುಳು, ನಿನಗೆ ನಮಸ್ಕಾರ ॥೨॥

ಅಲ್ಲಿ ರಣದುಂದುಭಿ, ಇಲ್ಲೊಂದು ವೀಣೆ, ನಿನ್ನ ಪ್ರತಿಧ್ವನಿ ।
ಆ ಮಹಾಕಾವ್ಯ, ಈ ಭಾವಗೀತೆ, ನಿನ್ನ ಪದಧ್ವನಿ ॥೩॥

0 comments:

Popular Posts