ಭಂಡನಾದೆನು ನಾನು
Tuesday, 1 March 2016
ಸಾಹಿತ್ಯ-ಪುರಂದರದಾಸ
ಭಂಡನಾದೆನು ನಾನು ಸಂಸಾರದಿ ।
ಕಂಡೂ ಕಾಣದ ಹಾಗೆ ಇರಬಹುದೆ ಹರಿಯೆ ॥
ಕಂಡ ಕಲ್ಲುಗಳಿಗೆ ಕೈಮುಗಿದು ಸಾಕಾದೆ
ದಿಂಡೆಕಾರರ ಮನೆಗೆ ಬಲು ತಿರುಗಿದೆ ।
ಶುಂಡಾಲನಂತೆನ್ನ ಮತಿ ಮಂದವಾಯಿತು
ಪುಂಡರೀಕಾಕ್ಷ ನೀ ಕರುಣಿಸಯ್ಯ ಬೇಗ ॥೧॥
ನಾನಾವ್ರತಗಳನು ಮಾಡಿ ನಾ ಬಳಲಿದೆನು
ಏನಾದರೂ ಎನಗೆ ಫಲವಿಲ್ಲವಯ್ಯ ।
ಆ ನಾಡು ಈ ನಾಡು ಸುತ್ತಿ ನಾ ಕಂಗೆಟ್ಟೆ
ಇನ್ನಾದರೂ ಕೃಪೆಯ ಮಾಡಯ್ಯ ಹರಿಯೆ ॥೨॥
ಬುದ್ಧಿಹೀನರ ಮಾತ ಕೇಳಿ ನಾ ಮರುಳಾದೆ
ಶುದ್ಧಿಯಿಲ್ಲದೆ ಮನವು ಕೆಟ್ಟುಹೋಯ್ತು ।
ಉದ್ಧಾರಕ ಪುರಂದರವಿಠಲನ ತತ್ತ್ವದ
ಸಿದ್ಧಿಯನು ದಯೆಗೈದು ಉದ್ಧರಿಸು ಹರಿಯೆ ॥೩॥ Read more...