ಕರುಣಿಸೋ ರಂಗ ಕರುಣಿಸೋ
Thursday, 6 February 2014
ಸಾಹಿತ್ಯ-ಪುರಂದರದಾಸ
ಕರುಣಿಸೋ ರಂಗ ಕರುಣಿಸೋ
ಹಗಲು ಇರುಳು ನಿನ್ನ ಸ್ಮರಣೆ ಮರೆಯದಂತೆ |
ರುಕುಮಾಂಗದನಂತೆ ವ್ರತವ ನಾನರಿಯೆ
ಶುಕಮುನಿಯಂತೆ ಸ್ತುತಿಸಲು ಅರಿಯೆ
ಬಕವೈರಿಯಂತೆ ಧ್ಯಾನವ ಮಾಡಲರಿಯೆ
ದೇವಕಿಯಂತೆ ಮುದ್ದಿಸಲರಿಯೆ ಕೃಷ್ಣ ||೧||
ಗರುಡನಂದದಿ ಪೊತ್ತು ತಿರುಗಲು ಅರಿಯೆ
ಕರೆಯಲು ಅರಿಯೆ ಕರಿರಾಜನಂತೆ
ವರಕಪಿಯಂತೆ ದಾಸ್ಯವ ಮಾಡಲರಿಯೆ
ಸಿರಿಯಂತೆ ನೆರೆದು ಮೋಹಿಸಲರಿಯೆ ಕೃಷ್ಣ ||೨||
ಬಲಿಯಂತೆ ದಾನವ ಕೊಡಲು ಅರಿಯೆ
ಭಕ್ತಿ ಛಲವನರಿಯೆ ಪ್ರಹ್ಲಾದನಂತೆ
ಒಲಿಸಲು ಅರಿಯೆ ಅರ್ಜುನಂತೆ ಸಖನಾಗಿ
ಸಲಹೋ ದೇವರದೇವ ಪುರಂದರವಿಠಲ ||೩||
0 comments:
Post a Comment