Pages

Showing posts with label ಜಗನ್ನಾಥದಾಸ. Show all posts
Showing posts with label ಜಗನ್ನಾಥದಾಸ. Show all posts

ಯಾಕೆ ಮೂಕನಾದ್ಯೋ

Tuesday, 9 March 2010

ಸಾಹಿತ್ಯ-ಜಗನ್ನಾಥದಾಸ


ಯಾಕೆ ಮೂಕನಾದ್ಯೋ ಗುರುವೆ ನೀ ಯಾಕೆ ಮೂಕನಾದ್ಯೋ ।
ಯಾಕೆ ಮೂಕನಾದೆ ಲೋಕಪಾಲಕ ಎನ್ನ ।
ಸಾಕುವರ್ಯಾರಯ್ಯ ಶ್ರೀಕರ ರಾಘವೇಂದ್ರ ॥

ಹಿಂದಕ್ಕೆ ನೀ ಎನ್ನ ಮುಂದೆ ಸುಳಿದಾಡಿದಿ ।
ಮಂದಿಯೊಳಗೆ ಎನ್ನ ಮಂದನ್ನ ಮಾಡಿದ್ಯಲ್ಲೋ ॥ ೧ ॥

ಬೇಕಾಗದಿದ್ದರಿನ್ನ್ಯಾಕೆ ಕೈಯನು ಪಿಡಿದೆ ।
ಕಾಕುಜನರೊಳೆನ್ನ ನೂಕಿಬಿಟ್ಟು ನೀನು (/ನೀ) ॥ ೨ ॥

ಈಗ ಪಾಲಿಸದಿರೆ ಯೋಗಿಕುಲವರ್ಯ ।
ರಾಘವೇಂದ್ರನೆ ಭವ ಸಾಗುವುದ್ಹ್ಯಾಂಗಯ್ಯ ॥ ೩ ॥

ನಿನ್ನಂಥ ಕರುಣಿಯಿಲ್ಲ ಎನ್ನಂಥ ಕೃಪಣಿಯಿಲ್ಲ ।
ಘನ್ನಮಹಿಮ ನೀ ಎನ್ನನು ಬಿಟ್ಟೀಗ ॥ ೪ ॥

ಜನನಿಯು ನೀ (ಎನಗೆ) ಎನ್ನ ಜನಕನಯ್ಯ ।
ಮನ್ನಿಸೊ ನೀ ನಿತ್ಯಾನನ್ಯ ಶರಣನೆ (/ಶರಣ್ಯ) ॥ ೫ ॥

ಎಂದಿಗಾದರು ನಿನ್ನ ಪೊಂದಿಕೊಂಡವನಲ್ಲೋ ।
ಇಂದು ನೀ ಕೈಬಿಟ್ಟರೆನ್ನ ಮುಂದೆ ಕಾಯುವರ್ಯಾರೋ ॥ ೬ ॥

ನಾಥನು ನೀ ಅನಾಥನು ನಾನಯ್ಯ ।
ಪಾತಕರರಿ ಜಗನ್ನಾಥವಿಠ್ಠಲದೂತ (/ಜಗನ್ನಾಥವಿಠ್ಠಲದಾಸ) ॥ ೭ ॥

Read more...

Popular Posts